spot_img
spot_img
spot_img
spot_img
spot_img

ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಪ್ರಾಣ ಬಿಟ್ಟ ಪ್ರೇಮಿ..!

Published on

spot_img

ವಿವೇಕ ವಾರ್ತೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪ್ರೇಮಿಯೊಬ್ಬ ವಿಡಿಯೋ ರೆಕಾರ್ಡ್ ಮಾಡಿ ತನ್ನ ಅಂತ್ಯಕ್ರಿಯೆಗೆ ಲವ್ವರ್’ನ್ನು ಆಹ್ವಾನ ನೀಡಿ ಲೈವ್​ನಲ್ಲೇ ಕೊನೆಯಸಿರೆಳೆದ ಘಟನೆ ನಡೆದಿದೆ.

ಲೈವ್ ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ ಕಿರಣ್ (22) ಎಂದು ತಿಳಿದುಬಂದಿದೆ.

ಯುವಕ ಕಿರಣ್ ತನ್ನ ಲೈವ್ ವಿಡಿಯೋದಲ್ಲಿ, ಹಾಯ್ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಆಗು. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ನನ್ನ ಸಾವಿಗೆ ನಿನ್ನ ತಂಗಿಯನ್ನು ಕರೆದುಕೊಂಡು ಬಾ. ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಹೀಗೆ ಚೆನ್ನಾಗಿರಿ ಎಂದು ಕಿರಣ್ ಲೈವ್​​ನಲ್ಲೇ ಕೈ ಮುಗಿದು ಪ್ರಾಣ ಕಳೆದುಕೊಂಡಿದ್ದಾನೆ‌.

ಮೃತ ಕಿರಣ್, ಆಗಸ್ಟ್ 3ರಂದು ತಾನೂ ಪ್ರೀತಿಸುತ್ತಿದ್ದ ಹುಡುಗಿಗೆ ರಿಂಗ್, ಕಾಲು ಚೈನ್ ಕೊಡಿಸಿದ್ದನು. ಈ ವಿಷಯ ತಿಳಿದ ಯುವತಿಯ ತಂದೆ ಇವರಿಬ್ಬರ ಪ್ರೀತಿಯನ್ನು ನಿರಾಕರಿಸಿದ್ದರು. ಹೀಗಾಗಿ ಯುವತಿ ಮನೆಯವರೆ ಏನೋ ಮಾಡಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆಂದು ಕಿರಣ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಇನ್ನು ರೇಬೀಸ್ ರೋಗ ಉಲ್ಬಣಗೊಂಡು ಯುವಕ ನಿಮಾನ್ಸ್ ಸೇರಿದ್ದ. ನಿಮಾನ್ಸ್ ಆಸ್ಪತ್ರೆಯ ಬೆಡ್ ಮೇಲೆಯೇ ವಿಡಿಯೋ ಮಾಡುತ್ತ ಪ್ರಾಣಬಿಟ್ಟಿದ್ದಾನೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!