ಬೆಂಗಳೂರು;- ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಜಾನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಅತ್ತಿಬೆಲೆ ಪಟಾಕಿ ಅನಾಹುತದಲ್ಲಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವವರ ಮತ್ತು ತಮ್ಮ ಮಕ್ಕಳು ಹಾಗೂ ಕುಟುಂಬದವರನ್ನು ಕಳೆದುಕೊಂಡ ತಾಯಂದಿರ ಜತೆ ಮಾತನಾಡಿದರು.
Related Content

ವೈದ್ಯರ ತಂಡದ ಜತೆ ಸಮಗ್ರವಾಗಿ ಚರ್ಚಿಸಿ ಅಗತ್ಯ ಇರುವ ಎಲ್ಲಾ ಆರೋಗ್ಯ ಮತ್ತು ಚಿಕಿತ್ಸಾ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
