Wednesday, September 27, 2023

ಅಮಾನವೀಯ ಕೃತ್ಯ: ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ ಮತ್ತು ಕುಟುಂಬಸ್ಥರು

ವಿವೇಕವಾರ್ತೆ :ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ (Rajasthan) ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ, ಮಹಿಳೆಯರ ವಿರುದ್ಧದ ಅಪರಾಧಗಳು ರಾಜ್ಯದಲ್ಲಿ ಎಷ್ಟು ಹರಡಿವೆಯೆಂದರೆ ರಾಜಸ್ಥಾನವು ದಿನದಿಂದ ದಿನಕ್ಕೆ ನಾಚಿಕೆಪಡಬೇಕಾಗಿದೆ. ಮಹಿಳಾ ದೌರ್ಜನ್ಯದಲ್ಲಿ ರಾಜ್ಯವನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಲೂಟಿ ಮತ್ತು ಕಿರುಚಾಟವನ್ನು ನಿಮ್ಮ ಕಾಂಗ್ರೆಸ್ ಸರ್ಕಾರ ಕೇಳದಿರುವುದು ಯಾಕೆ ಎಂದು ಅಶೋಕ್ ಗೆಹ್ಲೋಟ್ ಅವರನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವಿಡಿಯೋವನ್ನು ಹಂಚಿಕೊಳ್ಳದಂತೆ ಪ್ರತಾಪಗಢ ಪೊಲೀಸರು ಮನವಿ ಮಾಡಿದ್ದಾರೆ.

‘ಪ್ರತಾಪ್‌ಗಢದಲ್ಲಿ ಬುಡಕಟ್ಟು ಮಹಿಳೆಯೊಂದಿಗಿನ ಅನುಚಿತ ವರ್ತನೆಯ ವೀಡಿಯೊವನ್ನು ನೋಡಿದ ನಂತರ ಹೃದಯ ಮುರಿದಿದೆ. ಆರೋಪಿಗಳು ಕೃತ್ಯದ ವೀಡಿಯೋವನ್ನು ಬಹಿರಂಗವಾಗಿ ಮಾಡುತ್ತಿದ್ದಾರೆ. ಘಟನೆಯ ಹಿಂದಿರುವವರ ವಿರುದ್ಧ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರು ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಹಿಳೆಯರ ಅಸುರಕ್ಷತೆಯ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಯನ್ನು ಯಾವಾಗ ಕೇಳುತ್ತೀರಿ? ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಯಾವಾಗ ಒತ್ತಾಯಿಸುತ್ತೀರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, ಪ್ರತಾಪಗಢದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಡಿಜಿಪಿ ಉಮೇಶ್ ಮಿಶ್ರಾ ನಿರ್ದೇಶನ ನೀಡಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!