ವಿವೇಕ ವಾರ್ತೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಪರೀಕ್ಷೆ ಬರೆಯುವ ವೇಳೆ ಮೃತನಾದ ದುರ್ದೈವಿ ಬಾಲಕನನ್ನು ರಾಹುಲ ಕೋಲಕಾರ (15) ಎಂದು ಗುರುತಿಸಲಾಗುತ್ತಿದೆ.
ಬಾಲಕ ರಾಹುಲ 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಇದೀಗ ಅರ್ಧ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದ ಹಿನ್ನಲೆ ಬಾಲಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ಘಟನೆ ಸಂಭವಿಸಿದೆ.
ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ಬಾಲಕ ರಾಹುಲನಿಗೆ ಎದೆ ನೋವು ಕಾಣಿಸಿಕೊಂಡಿದೆ. ನೋವು ತೀವ್ರವಾದ ಪರಿಣಾಮ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದರೆ ದುರ್ದೈವಶಾತ್ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ವಿದ್ಯಾರ್ಥಿಗೆ ಹೃದಯ ಸಂಬಂಧಿ ಖಾಯಿಲೆ ಇತ್ತು ಎನ್ನಲಾಗಿದೆ.