ವಿವೇಕವಾರ್ತೆ : ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್ಲೈನ್ ವೇಶ್ಯಾವಾಟಿಕೆ ನಡೆಸುತ್ತಿದ್ದ 6 ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್‌ಪೆಕ್ಟರ್ ಹನುಮಂತರಾಯ ಭರ್ಜರಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಬಂಧಿತರು ಮಂಜುನಾಥ್, ಶಿವರಾಜ್, ಉಮೇಶ್, ಬಸವರಾಜ್, ರಾಯ, ಪ್ರದೀಪ್ ಎಂದು ತಿಳಿದುಬಂದಿದೆ.
ವೆಬ್ ಸೈಟ್ ಮೂಲಕ ಸುಂದರ ಯುವತಿಯರ ಫೋಟೊಗಳನ್ನು ಅಪ್ಲೋಡ್ ಮಾಡಿ, ಮೊಬೈಲ್ ನಂಬರ್ಗಳ ಮೂಲಕ ಲಾಗಿನ್ ಆಗುವ ಗಿರಾಕಿಗಳನ್ನು ಸೆಳೆಯುತ್ತಿದ್ದರು.
ಅವರು ಬಯಸುವ ಹುಡುಗಿಯರನ್ನು, ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಕರೆತಂದು ಆರೋಪಿಗಳು ಅಕ್ರಮವಾಗಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.