ವಿವೇಕವಾರ್ತೆ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಜಿ.ಪಿ ಮಲ್ಲಪ್ಪ ಪುರಂ ಬಡಾವಣೆಯಲ್ಲಿ ಎರಡು ಅಂತಸ್ತಿನ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಸಾವಿಗೀಡಾದ ಘಟನೆ ನಡೆದಿದೆ.
ಮೃತ ಶಿಕ್ಷಕಿ ಕೆ.ಪುಟ್ಟಿ (53) ಎಂದು ತಿಳಿದುಬಂದಿದೆ.
ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನು ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಮನೆಯವರು ಅವರನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.