ವಿವೇಕ ವಾರ್ತೆ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಅಮೃತ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಅಮೃತ ಮೂಲತಃ ಕೇರಳದ ತ್ರಿಶೂರಿನವರು. ಬಹಳ ಸಮಯಗಳಿಂದ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು.
ಎರಡೂ ಬೈಕ್‌ಗಳು ರಭಸವಾಗಿ ಡಿಕ್ಕಿಯಾಗಿರುವ ಪರಿಣಾಮ ಅಮೃತ ತೀವ್ರ ಗಾಯಗೊಂಡಿದ್ದರೆಂದು ತಿಳಿದು ಬಂದಿದೆ. ಕೂಡಲೇ ಅವರನ್ನುಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು.
ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅದಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.