ವಿವೇಕ ವಾರ್ತೆ : ಪಂದ್ಯ ನಡೆಯುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯುಕೆಯ ಡರ್ಬಿಶೈರ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇನ್ನು ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೂವರು ಗಾಯಾಳುಗಳಿಗೆ ಕತ್ತಿಯಿಂದ ಚುಚ್ಚಿ, ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
ಯುಕೆಯ ಡರ್ಬಿಶೈರ್ನಲ್ಲಿರುವ ಡರ್ಬಿ ಕ್ರೀಡಾಂಗಣದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಎರಡು ತಂಡಗಳು ಕಬಡ್ಡಿ ಪಂದ್ಯವನ್ನು ಆಡುತ್ತಿದ್ದರು. ಪಂದ್ಯದ ವೇಳೆ ಉಭಯ ತಂಡಗಳ ನಡುವೆ ವಿಚಾರ ಒಂದಕ್ಕೆ ಗಲಾಟೆ ಶುರುವಾದ ಪರಿಣಾಮ ಗಲಾಟೆ ನಡೆದಿದೆ.
ಗಲಾಟೆ ವಿಕೋಪಕ್ಕೆ ತಿರುಗಿ ಹೊಡೆದಾಟ ಶುರುವಾಗಿದ್ದು, ಮೂವರು ಆಟಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಯಾವ ಕಾರಣಕ್ಕೆ ಎರಡು ತಂಡಗಳ ನಡುವೆ ಘರ್ಷಣೆ ಸಂಭವಿಸಿತ್ತು ಎಂದು ತಿಳಿದು ಬಂದಿಲ್ಲ. ಘರ್ಷಣೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಲಾಟೆಗೆ ಸಂಬಂಧಿಸಿದಂತೆ ಯಾರಾದರೂ ಪ್ರತ್ಯಕ್ಷದರ್ಶಿಗಳಿದ್ದರೆ ದಯವಿಟ್ಟು ಮುಂದೆ ಬಂದು ತನಿಖೆಗೆ ಸಹಕರಿಸಿ ಎಂದು ಪೊಲೀಸ್ ಅಧಿಕಾರಿ ವಿನಂತಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
https://twitter.com/Sangha2Bs/status/1693456678862426276?ref_src=twsrc%5Etfw%7Ctwcamp%5Etweetembed%7Ctwterm%5E1693456678862426276%7Ctwgr%5E99692eae4227e38e861253a76afaad503d57d757%7Ctwcon%5Es1_c10&ref_url=https%3A%2F%2Fapi-news.dailyhunt.in%2F