ವಿವೇಕವಾರ್ತೆ : ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯಲೋಪ ಹಿನ್ನೆಲೆ ಇನ್ಸ್ಪೆಕ್ಟರ್ ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ.
ಪ್ರಕಾಶ್ ಈ ಹಿಂದೆ ಡಿ.ಜೆ.ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಗಾಂಜಾ ಸೀಜ್ ಮಾಡಿದ್ದ ವಾಹನವನ್ನು ಅಕ್ರಮವಾಗಿ ಬಿಟ್ಟಿದ್ದರು. ಈ ಘಟನೆಯ ಬಳಿಕ ಗಾಂಜಾ ಜಪ್ತಿ ಕೇಸ್‌ನಲ್ಲಿ ಆರೋಪಿಗಳ ಜೊತೆ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಬಳಿಕ ಇನ್ಸ್ಪೆಕ್ಟರ್ ಪ್ರಕಾಶ್ ವಿರುದ್ಧ ದೂರು ದಾಖಲಾಗಿತ್ತು. ಜೊತೆಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತನಿಖೆಗೆ ಆದೇಶಿಸಿದ್ದರು.
ಇದೀಗ ಆಂತರಿಕ ತನಿಖೆಯಲ್ಲಿ ಕರ್ತವ್ಯಲೋಪ ಸಾಬೀತಾದ ಹಿನ್ನೆಲೆ ಇನ್ಸ್‌ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.