ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ.
ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28) ಹಾಗೂ ಶಿವಕುಮಾರ್ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಉಜ್ವಲ್ ಕೃಷ್ಣ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೃತ ದುರ್ದೈಗಳೆಲ್ಲರೂ ಪಾವಗಡ ಮೂಲದವರು ಎಂಬ ಮಾಹಿತಿ ದೊರೆತಿದೆ.
ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.