ಕಾಲೇಜಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಾಂಶುಪಾಲರು.!

Published on

spot_img
spot_img

ವಿವೇಕ ವಾರ್ತೆ : ಬಾಗಲಕೋಟೆ ಜಿಲ್ಲೆಯ ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಕಟ್ಟಡದ ಒಳಗಡೆ ಪ್ರಾಂಶುಪಾಲರೊಬ್ಬರು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.

ಮೃತ ಪ್ರಾಂಶುಪಾಲ ನಾಗರಾಜ್ ಮುದಗಲ್ಲ (55) ಎಂದು ತಿಳಿದುಬಂದಿದೆ. ಇನ್ನೂ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ.

ಕಾಲೇಜ್ ಕ್ಯಾಂಟಿನ್​ ಸ್ಟೇರ್ ಕೇಸ್ ಗ್ರಿಲ್​​ಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಕಾಲೇಜಿನಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರ ಪೂರ್ವ ಸಿದ್ದತೆಗಾಗಿ ನಿನ್ನೆ ರಾತ್ರಿ ಪ್ರಾಂಶುಪಾಲರು ಕಾಲೇಜಿನಲ್ಲೆ ವಾಸ್ತವ್ಯ ಹೂಡಿದ್ದರು. ನಸುಕಿನ ಜಾವ ಎದ್ದು ನಿತ್ಯಕರ್ಮಗಳನು ಮುಗಿಸಿ ರೆಡಿಯಾಗಲೆಂದು ಕೊಠಡಿಯಿಂದ ಹೊರಗೆ ಬಂದ ಪ್ರಾಂಶುಪಾಲರು ಬಳಿಕ‌ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹುನಗುಂದ ಡಿವೈಎಸ್ಪಿ, ಸಿಪಿಐ, ಪಿಎಸ್​ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುನುಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!