ವಿವೇಕ ವಾರ್ತೆ : ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಎಂಬಲ್ಲಿ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಪತಿ ಹತ್ಯೆಗೈದಿರುವ ಘಟನೆ ನಡೆದಿದೆ.
ಸೊಲೋಚನಾ ಮೃತ ದುರ್ದೈವಿ. ಈಕೆಯ ಪತಿ ನಾಗರಾಜಪ್ಪ (48) ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
ಆರೋಪಿ ನಾಗರಾಜಪ್ಪ ಪ್ರತಿನಿತ್ಯ ಕುಡಿದು ಬಂದು ತನ್ನ ಹೆಂಡತಿಯ ಜೊತೆ ಜಗಳವಾಡುತ್ತಿದ್ದ. ಶುಕ್ರವಾರ ಮಧ್ಯಾಹ್ನವೂ ಆರೋಪಿ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಜೊತೆ ಜಗಳವಾಡಿದ್ದು, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಆರೋಪಿ ತನ್ನ ಪತ್ನಿಯನ್ನು ಮನಸೋಇಚ್ಛೆ ಥಳಿಸಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಆರೋಪಿ ನಡೆದ ಘಟನೆ ಬಗ್ಗೆ ಪೊಲೀಸರಿಗೆ ವಿವರಿಸಿ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂತೇಬೆನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.