spot_img
spot_img
spot_img
spot_img
spot_img
spot_img

ಕೂದಲು ಉದುರುತ್ತಿದೆ ಎಂದು ಮನನೊಂದ ಯುವಕ ಡೆತ್‍ನೋಟ್ ಬರೆದು ಆತ್ಮಹತ್ಯೆ

Published on

spot_img

ಕೂದಲು (Hair) ಉದುರುವ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ (Youth) ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ (Kerala) ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.

ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ. ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದೆಲ್ಲದರಿಂದ ಆತ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ. ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.

ಘಟನೆಗೆ ಸಂಬಂಧಿಸಿ ಪ್ರಶಾಂತ್ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಶೇಕಡಾ 99 ರಷ್ಟು ಜನರಿಗೆ ಗೊತ್ತಿರದ ಉಪಯೋಗ- ರೇಷನ್ ಕಾರ್ಡ್ ಅಂದ್ರೆ ರೇಷನ್ ಅಷ್ಟೇ ಅಲ್ಲ, ಸಾವಿರಾರು ಲಾಭ.! ಹೇಗೆ ಗೊತ್ತೇ?

ವಿವೇಕವಾರ್ತೆ : ರೇಷನ್ ಕಾರ್ಡ್ಗಳನ್ನು ಸರ್ಕಾರ ಜನರಿಗೆ ನಾವು ನೀಡುವಂತಹ ಯೋಜನೆಗಳು ನೇರವಾಗಿ ತಲುಪಲು ಸಾಧ್ಯವಾಗಲಿ ಹಾಗೂ ಉದಾಹರಣೆಗೆ...

QR Code ಮೂಲಕ ಭಿಕ್ಷೆ ಬೇಡುತ್ತಿರುವ ಭಿಕ್ಷುಕ, ಒಂದೇ ದಿನದಲ್ಲಿ ಎಷ್ಟು ಲಕ್ಷ ಸಂಪಾದನೆ ಗೊತ್ತಾ..?

ವಿವೇಕವಾರ್ತೆ : ಅಪಡೆಟ್ ಆಗಿದ್ದಾರೆ ಈಗಿನ ಭಿಕ್ಷುಕರು.ಸಾಮಾನ್ಯವಾಗಿ ಈ ದೇವಸ್ಥಾನಗಳ ಬಳಿ, ರೈಲ್ವೇ ಸ್ಟೇಷನ್, ಬಸ್ ನಿಲ್ದಾಣಗಳ ಬಳಿ...

ಕರುನಾಡಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ವರ್ತೂರ್ ಹಾಗೂ ತನಿಷಾ, ಇದೇ ತಿಂಗಳು ಬೆಂಗಳೂರಲ್ಲಿ ಸಂಭ್ರಮ

ವಿವೇಕವಾರ್ತೆ :ವರ್ತೂರು ಸಂತೋಷ್ ಮನೆಯ ಕಾರ್ಯಕ್ರಮದಲ್ಲಿ ತನಿಷಾ ಕುಪ್ಪಂಡ, ತುಕಾಲಿ ಸಂತೋಷ್ ಸೇರಿ ಅನೇಕರು ಬಿಡುವು ಮಾಡಿಕೊಂಡು ಆಗಮಿಸಿದ್ದರು....

ಕೋಳಿ ಸಾಕಾಣಿಕೆ ಮಾಡಲು 25 ಲಕ್ಷ ಸಹಾಯಧನ ರೈತರಿಗೆ ನಿರುದ್ಯೋಗಿಗೆ ಗೃಹಿಣಿಯರಿಗೆ.!!

ವಿವೇಕವಾರ್ತೆ :ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿಗಳನ್ನ ಉದ್ಯೋಗಿಗಳನ್ನಾಗಿ ಮಾಡಲು ಹಾಗು ರೈತರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ಮತ್ತು ಮನೆಯಲ್ಲಿರುವ ಗೃಹಿಣಿಯರು ಸೇರಿದಂತೆ...
error: Content is protected !!