ವಿವೇಕವಾರ್ತೆ : ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಶಿಬಾರ ಸರ್ಕಲ್ ಬಳಿ ಇರುವ ಗರಡಿ ಮನೆಯಲ್ಲಿ ನೇಣು ಬಿಗಿದುಕೊಂಡು ಕುಸ್ತಿಪಟು ಆಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕಾವ್ಯಾ ಪೂಜಾರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ತಿಳಿದುಬಂದಿದೆ.
ಕಾವ್ಯಾ ದಾವಣಗೆರೆ ಮೂಲದವರಾಗಿದ್ದು, ಧಾರವಾಡ ಕುಸ್ತಿ ಹಾಸ್ಟೆಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಇನ್ನು ಎರಡು ದಿನಗಳ ಹಿಂದಷ್ಟೇ ಈಕೆ ಹರಿಹರ ಪಟ್ಟಣಕ್ಕೆ ಬಂದಿದ್ದಳು. ಬೆಳಗ್ಗೆ ಗರಡಿ ಮನೆಯಲ್ಲಿ ತರಬೇತಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಕುರಿತು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.