ಗೋಕಾಕ : ಭೀಕರ ರಸ್ತೆ ಅಪಘಾತ, ಇಬ್ಬರು ಗಂಭೀರ..!

Published on

spot_img
spot_img

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳದ ಮುಖ್ಯ ರಸ್ತೆಯಲ್ಲೇ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರಿಗೂ ಗಂಭೀರವಾದ ಗಾಯಗಳಾದ ಘಟನೆ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.

ನಾಗಪ್ಪ ಭೀಮಪ್ಪ ಬೆಳಮರಡಿ (44) ಹಾಗೂ ಪತ್ನಿ ಕಸ್ತೂರಿ ನಾಗಪ್ಪ ಬೆಳಮರಡಿ (40) ಕೊಣ್ಣೂರ ಪಟ್ಟಣದ ನಿವಾಸಿಗಳಾಗಿದ್ದು, ಘಟಪ್ರಭಾ ಪಟ್ಟಣದಿಂದ ತಮ್ಮ ಸ್ವಂತ ಊರಾದ ಕೊಣ್ಣೂರಿಗೆ ಮರಳುತ್ತಿದ್ದಾಗ, ಎದುರಿಗೆ ಕೊಣ್ಣೂರು ಕಡೆಯಿಂದ ಬರುತ್ತಿದ್ದ ಇನ್ನೋರ್ವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ಕೊಣ್ಣೂರು ಕಡೆಯಿಂದ ಬರುತ್ತಿದ್ದ ವ್ಯಕ್ತಿಯನ್ನು ಬೆಲ್ಲದ ಬಾಗೇವಾಡಿ ನಿವಾಸಿ ಚಂದನ ನಾಗಪ್ಪ ದೊಡಮನಿ (24) ಎಂದು ತಿಳಿದುಬಂದಿದೆ.

ಎದುರು ಬದುರು ಡಿಕ್ಕಿ ಹೊಡೆದ ರಭಸಕ್ಕೆ ಒಂದು ಬೈಕ್ ನುಜ್ಜು ಗುಜ್ಜಾಗಿದೆ.

ಇನ್ನು ದುರ್ಘಟನೆಯಿಂದ ಬೈಕ್ ಸವಾರರಿಬ್ಬರಿಗೆ ಮಾರಣಾಂತಿಕ ಗಂಭೀರವಾದ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಬೈಕ್ ನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟಗಳಾಗಿವೆ.

ಅಪಘಾತವಾದ ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಘಟಪ್ರಭಾ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!