ವಿವೇಕ ವಾರ್ತೇ : ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಹಾಗೂ ಸದಸ್ಯರೊಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದೆ.
ಗ್ರಾ. ಪಂ ಅಧ್ಯಕ್ಷೆ ಪೂರ್ಣಿಮಾ ಎಂಬುವರ ಮೇಲೆ ಜಮ್ಮನಳ್ಳಿ ಕೃಷ್ಣ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಆವರಣದಲ್ಲೇ ಅಧ್ಯಕ್ಷೆ-ಸದಸ್ಯನ ಮಧ್ಯೆ ಮಾರಾಮಾರಿ ನಡೆದಿದ್ದು, ಸ್ಥಳೀಯರು ವಿಡಿಯೋ ಮಾಡಿದ್ದಾರೆ.
ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಬಗ್ಗೆ ಚರ್ಚೆ ನಡೆಯುತಿತ್ತು. ಈ ವೇಳೆ ಪಂಚಾಯಿತಿ ಸದಸ್ಯನಾಗಿರುವ ಜಮ್ಮನಳ್ಳಿ ಕೃಷ್ಣ ಗಲಾಟೆ ಮಾಡಿದ್ದಾರೆ. ಸಾಮಾನ್ಯ ಸಭೆ ನಡೆಯುವಾಗಲೇ ಗ್ರಾಮ ಪಂಚಾಯಿತ ಅಧ್ಯಕ್ಷೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಗ್ರಾಮಸ್ಥರು ಮಧ್ಯ ಪ್ರವೇಶ ಮಾಡಿ ಗಲಾಟೆಯನ್ನು ನಿಲ್ಲಿಸಿದ್ದಾರೆ. ಘಟನೆಯ ಕುರಿತು ಮುಳಬಾಗಿಲು ಠಾಣೆಯಲ್ಲಿ ದೂರು ದಾಖಲಾಗಿದೆ.