Tuesday, September 26, 2023

ಚಿರತೆಗೆ ಶಾಲು ಹೊದಿಸಿ ಬರ್ತಡೇ ಮಾಡಿದ ಡಾ.ಬ್ರೋ ; ವಿಡಿಯೋ ವೈರಲ್.!

ವಿವೇಕ ವಾರ್ತೆ ಕನ್ನಡದ ಯೂಟ್ಯೂಬರ್‌ ಡಾ. ಬ್ರೋ ಅಲಿಯಾಸ್‌ ಗಗನ್‌ ಶ್ರೀನಿವಾಸ್ ಅವರು ಯೂಟ್ಯೂಬ್‌ನಲ್ಲಿ ಎರಡು ಮಿಲಿಯನ್‌ ಸನಿಹ ಸಬ್‌ಸ್ಕ್ರೈಬರ್ಸ್‌ ಹೊಂದಿದ್ದಾರೆ. ಸದ್ಯ ತಮ್ಮ ವಿಡಿಯೋಗಳ ಮೂಲಕವೇ ಫೇಮಸ್‌ ಆಗಿದ್ದಾರೆ.

ಡಾ. ಬ್ರೋ ಅಲಿಯಾಸ್‌ ಗಗನ್‌ ಶ್ರೀನಿವಾಸ್ ವಯಸ್ಸು ಈಗಿನ್ನೂ 24. ಗಗನ್ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಹತ್ತಾರು ದೇಶ ಸುತ್ತಿ, ಕರುನಾಡಿನ ಮಂದಿಗೆ ಕುಳಿತಲ್ಲೇ ಪ್ರಪಂಚ ತೋರಿಸುತ್ತಿದ್ದಾರೆ.

ಡಾ. ಬ್ರೋ. ಹೋದ ದೇಶದಲ್ಲಿನ ಆಚರಣೆ, ಆಹಾರ ಪದ್ಧತಿ, ಅಲ್ಲಿನ ವಿಸ್ಮಯಗಳನ್ನೂ ತಮ್ಮ ವಿಡಿಯೋ ಮೂಲಕ ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಪಾಯಕಾರಿ ಸ್ಥಳಗಳಿಗೂ ತೆರಳಿ ಅಲ್ಲಿನ ಅಸಲಿ ವಿಚಾರವನ್ನು ವಿಡಿಯೋ ಮೂಲಕ ವೀಕ್ಷಕರಿಗೆ ತಿಳಿಸುತ್ತಾರೆ.

ಇದೀಗ ಆಫ್ರಿಕಾ ಖಂಡದ ಮತ್ತೊಂದು ದೇಶ ಸೋಮಾಲಿಯಾಕ್ಕೆ ಡಾ. ಬ್ರೋ ಭೇಟಿ ನೀಡಿದ್ದಾರೆ. ಸೋಮಾಲಿಯಾದಲ್ಲಿನ ಸ್ಥಿತಿಗತಿಗಳನ್ನೂ ವಿವರಿಸಿದ್ದಾರೆ. ಬೀದಿ ಬದಿಯಲ್ಲಿ ಹಣ ಮಾರುವವರನ್ನೂ ಪರಿಚಯಿಸಿಕೊಟ್ಟಿದ್ದಾರೆ. ಭಾರತದಲ್ಲಿ ಹಣದ ನಿರ್ವಹಣೆಯ ಹೊಣೆ ರಿಸರ್ವ್‌ ಬ್ಯಾಂಕ್‌ನದ್ದು. ಅದೇ ರೀತಿ ಸೋಮಾಲಿಯಾದಲ್ಲಿ ಅಲ್ಲಿನ ಜನಗಳೇ ಹಣವನ್ನು ಬೀದಿ ಬದಿಯಲ್ಲಿ ಮಾರಾಟ ಮಾಡುತ್ತಾರೆ.

ಇದರ ಜತೆಗೆ ಪಕ್ಕದಲ್ಲಿನ ಪ್ರಾಣಿ ಸಂಗ್ರಹಾಲಯಕ್ಕೂ ಗಗನ್ ಭೇಟಿ ನೀಡಿದ್ದಾರೆ. ಅಲ್ಲಿ ಸಿಂಹದ ಕಡೆಯಿಂದ ಮೂತ್ರದ ಅಭಿಷೇಕವನ್ನೂ ಮಾಡಿಸಿಕೊಂಡಿದ್ದಾರೆ. ಇನ್ನೊಂದು ಅಚ್ಚರಿಯ ವಿಚಾರವೆಂದರೆ ಸೋಮಾಲಿಯಾದ ಚಿರತೆಯನ್ನು ಸನ್ಮಾನಿಸಿದ್ದಾರೆ.

ನೀನೇ ಕಾಡಿನ ರಾಜ..

ಚಿರತೆ ನೀನೇ ಕಾಡಿನ ರಾಜ್‌ ಇನ್ಮೇಲೆ. ಕಾಡಿಗೆ ನೀನೇ ಅಧಿಪತಿ. ಎಲ್ಲ ಪ್ರಾಣಿಗಳಿಗೂ ನೀನೇ ರಾಜ. ನೀನೇ ಇನ್ನುಂದೆ ಕಾಡನ್ನ ಆಳಬೇಕು ಎಂದು ಹರಸಿ. ಶತಮಾನಂ ಭವತಿ ಸ್ತೋತ್ರ ಪಠಿಸಿ ಚಿರತೆಗೆ ಶಾಲು ಹೊದಿಸಿ, ತಲೆಗೆ ಕಿರು ಪೇಟವನ್ನೇ ಹೋಲುವ ಟೋಪಿ ಹಾಕಿ, ಕಾಡಿ ರಾಜ ಚಿರತೆಗೆ ಜೈ ಎಂದು ಜೈಕಾರ ಹಾಕಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ತುಣುಕು ಸದ್ಯ ವೈರಲ್‌ ಆಗಿದೆ. ಗಗನ ಸಾಹಸಕ್ಕೆ ನೋಡುಗರು ಜೈಕಾರ ಹಾಕಿದ್ದಾರೆ.

https://twitter.com/UppinaKai/status/1697492796561830275?s=20

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!