ವಿವೇಕವಾರ್ತೆ : ಸೇನೆ (Indian Army) ಹಾಗೂ ಉಗ್ರರ (Terrorists) ನಡುವೆ ನಡೆದ ಗುಂಡಿನ ಚಕಮುಕಿಯಲ್ಲಿ ಮೂವರು ಯೋಧರು (Soldiers) ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನಲ್ಲಿ (Kulgam) ನಡೆದಿದೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಸೇನೆ ಹಾಗೂ ಪೊಲೀಸರು ಶುಕ್ರವಾರ ಸಂಜೆಯಿಂದಲೇ ಎನ್‍ಕೌಂಟರ್ ಪ್ರಾರಂಭಿಸಿದ್ದಾರೆ.
ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ
ಗುಂಡಿನ ದಾಳಿ ನಡೆಸಿ ಬಳಿಕ ಭಯೋತ್ಪಾದಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿರುವಾಗ ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನೆ ಹುಡುಕಾಟ ಆರಂಭಿಸಿದೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.