Friday, September 22, 2023

ಡೆತ್ ನೋಟ್ ಅಲ್ಲಿ ವಿಚಿತ್ರ ಆಸೆ..! ಶವ ನೋಡಲು ಬರಲಿಲ್ಲ ಅಂದ್ರೆ ದೆವ್ವ ಆಗಿ ಬರುವುದು..!?

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.

ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. ‘ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ’ ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

RELATED ARTICLES

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...

Karnataka Govt Free Laptop: ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್‌ಟಾಪ್ ಬೇಕೇ?, ಹೀಗೆ ಅರ್ಜಿ ಸಲ್ಲಿಸಿ

ವಿವೇಕವಾರ್ತೆ : ಹಣದುಬ್ಬರದ ನಡುವೆ ನಾವು ಯಾವುದೇ ವಸ್ತುವನ್ನು ಖರೀದಿ ಮಾಡಬೇಕಾದರೂ ಹಣಕಾಸು ದೊಡ್ಡ ಸಮಸ್ಯೆಯಾಗಿದೆ. ಹಾಗಿರುವಾಗ ನಿಮಗೆ ಉಚಿತವಾಗಿ ಲ್ಯಾಪ್‌ಟಾಪ್ ಲಭ್ಯವಾಗುತ್ತದೆ ಎಂದಾದರೆ ನೀವು ಬಿಡುತ್ತೀರಾ?. ನೀವು ಈಗಾಗಲೇ 12 ನೇ...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!