ವಿವೇಕವಾರ್ತೆ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಮೂರು ವರ್ಷದ ಹಿಂದಷ್ಟೇ ಮದುವೆ ಆಗಿದ್ದ ಜೋಡಿಯೊಂದು ಒಂದೇ ವೇಲಿನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿ ಘಟನೆ ನಡೆದಿದೆ.
ಮೃತರು ರೊಪ್ಪ ಗ್ರಾಮದ ಮನು (26) ಹಾಗೂ ಪವಿತ್ರ (24) ಎಂದು ತಿಳಿದುಬಂದಿದೆ.
ಮನು, ಪವಿತ್ರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪವಿತ್ರಾಳ ವೇಲಿನಲ್ಲೇ ಇಬ್ಬರು ನೇಣಿಗೆ ಕೊರಳೊಡ್ಡಿದ್ದಾರೆ.
ದಂಪತಿ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ಇಬ್ಬರು ಎಂದಿನಂತೆ ಮನೆಯಿಂದ ಹೊರಬಾರದ ಕಾರಣ ಸ್ಥಳೀಯರು ನೋಡಿದಾಗ ವಿಷಯ ಗೊತ್ತಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ