ವಿವೇಕ ವಾರ್ತೆ : ನಟಿ ಅಪರ್ಣಾ ನಾಯರ್ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ.
ಇದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವು ಉಂಟು ಮಾಡಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ನಾಯರ್ ಅವರ ಶವ ಪತ್ತೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲಯಾಳಂ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಪರ್ಣಾ ನಾಯರ್ ಅವರು ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
ಅಪರ್ಣಾ ನಾಯರ್ ಅವರು ತಿರುವನಂತಪುರಂನಲ್ಲಿ ವಾಸವಾಗಿದ್ದರು. ಅವರಿಗೆ 31 ವರ್ಷ ವಯಸ್ಸಾಗಿತ್ತು. ಇನ್ನೂ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಅವರು ಸಾವನ್ನಪ್ಪಿದರು ಎಂದು ವರದಿ ಆಗಿದೆ.