Wednesday, September 27, 2023

ಪಶುಸಂಗೋಪನೆ ಮಾಡುವ ರೈತರಿಗೆ ಗುಡ್ ನ್ಯೂಸ್ ದನದ ಕೊಟ್ಟಿಗೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಸಿಗಲಿದೆ 57 ಸಾವಿರ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ

ವಿವೇಕವಾರ್ತೆ :ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಅನೇಕ ಯೋಜನೆಗಳ ಪ್ರಯೋಜನವನ್ನು ನೀಡುತ್ತಾ ಬಂದಿತ್ತು. ಇದೀಗ ದನದ ಕೊಟ್ಟಿಗೆ ನಿರ್ಮಾಣಕ್ಕೆ ಸಹಾಯಧನ ನೀಡಲು ಮುಂದಾಗಿದೆ. ಗ್ರಾಮೀಣ ಭಾಗದ ರೈತರಿಗೆ 57,000 ರೂ ಧನ ಸಹಾಯದೊಂದಿಗೆ ದನದ ದೊಡ್ಡಿ ನಿರ್ಮಾಣ ಕಾಮಗಾರಿಗೆ ಆಯುಕ್ತಾಲಯದಿಂದ ಹೊಸ ಸಂದೇಶ ಹೊರಡಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್ ಅವರು ತಿಳಿಸಿದ್ದಾರೆ.

ಈ ಯೋಜನೆ ಅಡಿ ಇದಕ್ಕೂ ಮೊದಲು SC ಮತ್ತು ST ಕುಟುಂಬದವರಿಗೆ ಮಾತ್ರ 43,000 ಸಹಾಯದನ ಮತ್ತು ಇತರೆ ವರ್ಗದ ಕುಟುಂಬದವರಿಗೆ 22,000ಗಳನ್ನು ಮಾತ್ರ ಕೊಟ್ಟಿಗೆ ನಿರ್ಮಾಣಕ್ಕೆ ಸಹಾಯಧನವಾಗಿ ನೀಡಲಾಗುತ್ತಿತ್ತು. ಈಗ ಇದರಲ್ಲಿ ಸ್ವಲ್ಪ ಮಾರ್ಪಾಡು ಮಾಡಿ ಸಹಾಯಧನವನ್ನು ಎಲ್ಲ ವರ್ಗದವರಿಗೂ ಸಮಾನವಾಗಿ ತಲುಪುವಂತೆ ಇನ್ನು ಹೆಚ್ಚಿನ ಮೊತ್ತದ ಸಹಾಯಧನ ನೀಡುವಂತೆ ನಿರ್ಣಯ ಮಾಡಲಾಗಿದೆ.

ದಿನಾಂಕ 20.07.2022ರಂದು ನಾಲ್ಕು ಜಾನುವಾರುಗಳಿಗೆ 57,000 ರೂ ಅಂತೆ ಎಲ್ಲಾ ವರ್ಗದ ಜನರಿಗೂ ಕೂಡ ಇದೆ ಅನ್ವಯವಾಗುವಂತೆ ವೈಯುಕ್ತಿಕ ಆಧಾರಿತ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಬುಡಕಟ್ಟೆಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟೆಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು.

ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ವಸತಿ ಯೋಜನೆಯ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006 ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳು ಇವರೆಲ್ಲರೂ ಸಹ ಸದರಿ ಯೋಜನೆಯ ಅಡಿ ವೈಯಕ್ತಿಕ ಕಾಮಗಾರಿಗಳನ್ನು ಪಡೆಯಲು ಅರ್ಹರಿಸುತ್ತಾರೆ.

ಜಿಲ್ಲೆಯ ಗ್ರಾಮೀಣ ಭಾಗದ ರೈತರು ವೈಯುಕ್ತಿಕ ದನದ ದೊಡ್ಡಿ ನಿರ್ಮಾಣಕ್ಕಾಗಿ ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ನರೇಗಾ ಯೋಜನೆ ಅಡಿ ಈ ವರ್ಷ ಒಳ್ಳೆಯ ಸಿಹಿ ಸುದ್ದಿ ಸಿಕ್ಕಿದೆ. ರೈತರುಗಳು ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳನ್ನು ನೀಡಿ ಈ ಯೋಜನೆ ಫಲಾನುಭವಿಗಳಾಗಬಹುದು. ಆದರೆ ಕೆಲವೊಂದು ಷರತ್ತುಗಳು ಇಲ್ಲಿ ರೈತರಿಗೆ ಇರುತ್ತದೆ.

ಅದೇನೆಂದರೆ ಅವರು ಕಡ್ಡಾಯವಾಗಿ ಕರ್ನಾಟಕದ ರೈತರಾಗಿರಬೇಕು, ಅವರ ಬಳಿ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕಾಗಿ ಸ್ವಂತ 22 ಅಡಿ ಉದ್ದ ಹಾಗೂ 12 ಅಡಿ ಅಗಲದ ಜಾಗ ಇರಬೇಕು, ಕನಿಷ್ಠ ನಾಲ್ಕು ಹಸುಗಳನ್ನಾದರೂ ಅವರು ಸಾಕುತ್ತಿರಬೇಕು, ಅವರು ಹಸುಗಳನ್ನು ಹೊಂದಿರುವ ಬಗ್ಗೆ ಸಂಬಂಧಪಟ್ಟ ವೈದ್ಯಾಧಿಕಾರಿಗಳ ಬಳಿ ದೃಢೀಕರಣ ಪತ್ರವನ್ನು ಕೂಡ ತರಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಅವರು ನರೇಗಾ ಕಾರ್ಡ್ ಹೊಂದಿರಬೇಕು.

ಇಷ್ಟೆಲ್ಲಾ ದಾಖಲಾತಿಗಳು ಇದ್ದಲ್ಲಿ ತಪ್ಪದೇ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಫಲಾನುಭವಿಗಳಾಗಬಹುದು. ಈ ವಿಷಯವನ್ನು ನಿಮ್ಮ ಕುಟುಂಬದವರು ಸ್ನೇಹಿತರ ಜೊತೆ ಹಂಚಿಕೊಳ್ಳುವ ಮೂಲಕ ಇನ್ನು ಹೆಚ್ಚಿನ ರೈತರಿಗೆ ಈ ಮಾಹಿತಿ ತಿಳಿಯುವಂತೆ ಮಾಡಿ. ಇದರಿಂದ ಕರ್ನಾಟಕದಾದ್ಯಂತ ಇರುವ ಸಾಕಷ್ಟು ರೈತರಿಗೆ ಖಂಡಿತವಾಗಿ ಅನುಕೂಲ ಆಗಲಿದೆ. ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಈ ಹೊಸ ಯೋಜನೆ ಬಗ್ಗೆ ರೈತರಿಗೆ ಎಷ್ಟು ಅನುಕೂಲ ಆಗುತ್ತಿದೆ ಎಂದು ನಿಮ್ಮ ಅಭಿಪ್ರಾಯವನ್ನು ಅನಿಸಿಕೆ ಬಗ್ಗೆ ಕೂಡ ತಪ್ಪದೆ ಕಮೆಂಟ್ ಮಾಡಿ ತಿಳಿಸಿ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!