ವಿವೇಕ ವಾರ್ತೆ : ರಾಮನಗರ ಹೊರವಲಯದ ಕುಂಬಾಪುರ ಗೇಟ್ ಸಮೀಪ, ಪ್ರೀತಿಗೆ ಪೋಷಕರು ಅಡ್ಡಿಪಡಿಸಿದ ಕಾರಣ ಯುವ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನವ್ಯ (19) ಹಾಗೂ ಹರ್ಷವರ್ಧನ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಎಂದು ತಿಳಿದುಬಂದಿದೆ.
ನವ್ಯ ಹಾಗೂ ಹರ್ಷವರ್ಧನ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ಪ್ರೇಮಿಗಳು ರೈಲ್ವೇ ಗೇಟ್ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೇಹದ ಮೇಲೆ ರೈಲು ಹರಿದ ಪರಿಣಾಮ ದೇಹ ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಚನ್ನಪಟ್ಟಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.