spot_img
spot_img
spot_img
spot_img
spot_img
spot_img

ಪ್ರೀತಿಸಿ ಯುವತಿ ವಂಚಿಸಿದ ಆರೋಪ ; ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ.!

Published on

spot_img

ವಿವೇಕವಾರ್ತೆ : ನಗರದ ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ 25 ವರ್ಷದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು 25 ವರ್ಷದ ಯೋಗೇಶ್ ಎಂದು ಗುರುತಿಸಲಾಗಿದೆ. ಯುವಕ ಯೋಗೇಶ ಅಕ್ಟೋಬರ್ 5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಯೋಗೇಶ್​ನನ್ನು ಪೋಷಕರು ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಯೋಗೇಶ್ ಸಾವನ್ನಪ್ಪಿದ್ದಾನೆ.

ಮೃತ ದುರ್ದೈವಿ ಯುವಕ ಯೋಗೇಶ್ ನಾಗಮಂಗಲದ ಆಡೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಯುವಕ ಯೋಗೇಶ್ ನಾಗಮಂಗಲ ಮೂಲದ ಯುವತಿಯನ್ನ ಪ್ರೀತಿಸುತ್ತಿದ್ದ ಎಂದು ಗೊತ್ತಾಗಿದೆ.  ಯೋಗೇಶ ಹಾಗೂ ಆತನ ಪ್ರೇಯಸಿ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ ಇತ್ತೀಚಿಗೆ ಯೋಗೇಶ ಪ್ರೀತಿಸುತ್ತಿದ್ದ ಯುವತಿ ದೂರವಾಗಿದ್ದಳು. ಪರಿಣಾಮ ಯುವಕ ಯೋಗೇಶ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್​​​ನೋಟ್​​ನಲ್ಲಿ ಏನಿದೆ..?

ನಾಲ್ಕೈದು ವರ್ಷದಿಂದ ಅವಳನ್ನು ಪ್ರೀತಿ ಮಾಡುತ್ತಿದೆ, ಅವಳಿಗೆ ಮನಸ್ಸಿನಲ್ಲಿ ಪ್ರೀತಿ ಇದೆ, ಭಯ ಪಡೆದುಕೊಂಡು ಇರುತ್ತಾಳೆ. ಆದರೆ ಹುಡುಗಿ ಸಪೋರ್ಟ್​ ಆಯ್ತೆ ಅಂತ ಎಲ್ಲರೂ ಒಂದು ಹುಡುಗ ಲೈಫ್​​ನಲ್ಲಿ ಆಟ ಆಡುತ್ತಾರೆ. ಪೊಲೀಸರಿಗೆ ಕಂಪ್ಲೇಟ್ ಕೊಡ್ತೀವಿ ಅಂತ ಭಯ ಪಡಿಸುತ್ತಿದ್ದಾರೆ.

ದಿನ ಅವಳಿಗೋಸ್ಕರ ನೋವು ಅನುಭವಸುತ್ತಿದ್ದೆ. ಮನಸ್ಸಿಗೆ ತುಂಬಾ ನೋವಾಗುತ್ತೆ, ಒಂದೇ ಸಾಲ ಸಾಯಬೇಕು ಅನಿಸುತ್ತಿದೆ. ನನ್ನನ್ನು ಕ್ಷಮಿಸಿ ಮತ್ತೆ ಬರುತ್ತಾಳೆ ಅಂದುಕೊಂಡಿದ್ದೇನೆ ಎಂದು ಸುಮಾರು ಐದು ಪುಟಗಳಷ್ಟು ಡೆತ್​​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ವಿಷ ಸೇವಿಸುವ ಮುನ್ನ ಹೀಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ.

ಈ ಘಟನೆ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!