spot_img
spot_img
spot_img
spot_img
spot_img

ಪ್ರೇಮ ವೈಫಲ್ಯದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ.!

Published on

spot_img

ವಿವೇಕ ವಾರ್ತೆ ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೇಬಲ್ ಉಮೇಶ್ ನಾಯ್ಕ್ ಎಂದು ತಿಳಿದುಬಂದಿದೆ.

25 ವರ್ಷದ ಉಮೇಶ್ ಅವರು ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ಅಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಉಮೇಶ್ ನಾಯಕ್ ಅವರು ಮೂಲತಃ ವಿಜಯನಗರ ಜಿಲ್ಲೆಯವರು.

2021ರಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಆಯ್ಕೆಯಾಗಿ ಬೀದರ್ ನಲ್ಲಿ ನೇಮಕಾತಿ ಪಡೆದಿದ್ದರು. ಇನ್ನೂ ಉಮೇಶ್ ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಸುತ್ತಿದ್ದರು. ಪ್ರೇಮ ವೈಫಲ್ಯದಿಂದ ನೊಂದು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಉಮೇಶ್ ನಾಯಕ್ ಹುಡುಗಿಯೋರ್ವಳನ್ನು ಪ್ರೀತಿಸುತ್ತಿದ್ದು, ಆಕೆ ಈಗ ಪ್ರೀತಿ ನಿರಾಕರಿಸಿದ್ದಳು ಎಂದು ಹೇಳಲಾಗಿದೆ. ಸದ್ಯ ಅವರ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಲೇ ಪೋಷಕರು ವಿಜಯ ನಗರದಿಂದ ಬರುತ್ತಿದ್ದಾರೆ.

ಬಸವ ಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!