ವಿವೇಕವಾರ್ತೆ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ ಸಂದರ್ಭದಲ್ಲಿ ಪೊಲೀಸ್ ಕಾನಸ್ಟೇಬಲ್‌ಗಳ ಮೇಲೆ ಚಾಕುವಿನಿಂದ ಹಲ್ಲೆಗೈದು ಪರಾರಿಯಾದ ಘಟನೆ ಕಲಬುರಗಿಯ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹ್ಮದ್ ಇಮ್ರಾನ್ ಪಾಶಾ ಎಂಬಾತನನ್ನು ಬಂಧಿಸಲು ರಾಘವೇಂದ್ರ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮುಜಾಹಿದ್ ಕೋತ್ವಾಲ್ ಮತ್ತು ಉಮೇಶ್ ತೆರಳಿದ್ದರು.
ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಮಹ್ಮದ್ ಇಮ್ರಾನ್‌ನನ್ನು ಹಿಡಿಯುವಾಗ ಚಾಕುವಿನಿಂದ ಮುಜಾಹಿದ್ ಕೋತ್ವಾಲ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದಾನೆಂದು ದೂರಲಾಗಿದೆ. ಗಾಯಗೊಂಡಿರುವ ಕಾನ್ಸ್‌ಟೇಬಲ್ ಮುಜಾಹಿದ್ ಕೋತ್ವಾಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.