ವಿವೇಕ ವಾರ್ತೆ : ಬಸ್ಸೊಂದು ನದಿಗೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ದುರ್ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಡೆಪ್ಯುಟಿ ಕಮಿಷನರ್ ನಮನ್ ಪ್ರಿಯೇಶ್, ಸಾವು-ನೋವುಗಳನ್ನು ಖಚಿತಪಡಿಸಿದ್ದಾರೆ.
ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಘಾತದ ಸ್ಥಳದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ರಾಂಚಿಯಿಂದ ಗಿರಿದಿಹ್‌ಗೆ ಹೋಗುತ್ತಿದ್ದ ಬಸ್ ಬರಾಕರ್ ನದಿಗೆ ಬಿದ್ದಿದೆ ಎಂಬ ದುಃಖದ ಸುದ್ದಿ ನನಗೆ ಬಂದಿದೆ. ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಜೆಎಂಎಂ ನಾಯಕರು ಮತ್ತು ಕಾರ್ಯಕರ್ತರು ಸಹ ಈ ಪ್ರಯತ್ನಕ್ಕೆ ಕೈಜೋಡಿಸಿದ್ದಾರೆ ಎಂದು ಸಿಎಂ ಹೇಮಂತ್ ಸೊರೆನ್ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.