ವಿವೇಕ ವಾರ್ತೆ : ತುಮಕೂರು ನಗರದ ಬಸ್ ನಿಲ್ದಾಣದಲ್ಲಿ ಸೀಟ್ ಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದ್ದು ಬಿಡಿಸಲು ಹೋದ ಕಂಡೆಕ್ಟರ್ ಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ ನಲ್ಲಿ ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಕಾದಾಟ ಆರಂಭಿಸಿದ್ದಾರೆ. ಮಹಿಳೆಯರ ಜಗಳ ತಡೆಯಲು ಹೋದ ಕಂಡೆಕ್ಟರ್ ಗೆ ಚಪ್ಪಲಿಯಿಂದ ಥಳಿಸಿದ್ದಾಳೆ.
ಮಹಿಳೆ ಹಲ್ಲೆ ನಡೆಸಿದ್ದರಿಂದಾಗಿ ಕಂಡೆಕ್ಟರ್ ತುಮಕೂರು ಟೌನ್ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.