ವಿವೇಕ ವಾರ್ತೆ : ಪ್ರತಿನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯಾದ ವ್ಯಕ್ತಿಯನ್ನು ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (35) ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಯರಗಟ್ಟಿ ತಾಲೂಕಿನ ಹಿರೇಕೊಪ್ಪ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ (43) ಮತ್ತು ಅಡಿವೆಪ್ಪ ಅಜ್ಜಪ್ಪ ಬೊಳತ್ತಿನ (38) ಎಂದು ಹೇಳಲಾಗುತ್ತಿದೆ.
ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಯರಗಟ್ಟಿ ತಾಲೂಕಿನ ಕುಟರನಟ್ಟಿ ಗ್ರಾಮದಲ್ಲಿ ಸಂಗಮೇಶ ಶವ ಪತ್ತೆಯಾಗಿತ್ತು.
ಈ ಬಗ್ಗೆ ಸಂಗಮೇಶ ಸಹೋದರ ಮಹೇಶ ತಿಗಡಿ ಮುರಗೋಡ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಪ್ರಕರಣ ಬೇಧಿಸಿದೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಸಂಗಮೇಶನ ತಂದೆ ಮಾರುತಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.