ವಿವೇಕವಾರ್ತೆ : ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ಮಿಚಿಗನ್ ಲೇಔಟ್‌ನಲ್ಲಿರುವ ಆನಿಶೆಟ್ಟರ್ ಅವರ ಮನೆ ಮೇಲೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸಂತೋಷ ಆನಿಶೆಟ್ಟರ್ ಅವರು ಈ ಮೊದಲು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಹಾಯಕ ಆಯುಕ್ತರಾಗಿದ್ದರು. ಕೆಲ ವರ್ಷಗಳ ಹಿಂದೆ ಅವರು ಬೆಳಗಾವಿ ಮಹಾನಗರ ಪಾಲಿಕೆಗೆ ವರ್ಗಾವಣೆಯಾಗಿದ್ದರು.