ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಟಾಟಾ ಎಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಈ ಅಪಘಾತದಲ್ಲಿ ಅನಿಲ ಪಾಟೀಲ್ (45) ಹಾಗೂ ಅನಿತಾ ಪಾಟೀಲ್ (40) ಎಂಬುವರು ಸಾವಿಗೀಡಾಗಿದ್ದಾರೆ. ಇವರು ಮೂಲತಃ ಮಹಾರಾಷ್ಟ್ರದ ಜತ್ತ ತಾಲೂಕಿನ ಸಿಗನಾಪೂರ ಗ್ರಾಮದವರು ಎಂದು ತಿಳಿದುಬಂದಿದೆ.
ದಂಪತಿ ತಮ್ಮೂರಾದ ಸಿಂಗನಾಪುರ ಗ್ರಾಮದಿಂದ ಅಥಣಿಯತ್ತ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಮೊದಲು ಟಾಟಾ ಎಸ್ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ.
ಆಬಳಿಕ ಅಪಘಾತವಾದ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕಾಗಮಿಸಿದ ಅಥಣಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.