ವಿವೇಕ ವಾರ್ತೆ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ.
ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈತ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ಪೊಲೀಸರಿಗೆ ದೂರು ನೀಡಿದ್ದಾರೆ.
ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.