ಬೆಳಗಾವಿ : ರಾಣಿ ಚನ್ನಮ್ಮ ಮೂರ್ತಿ ತೆರವು ಮಾಡಿದ ಪೊಲೀಸರು, ಬಿಗುವಿನ ವಾತಾವರಣ.!

Published on

spot_img
spot_img

ವಿವೇಕ ವಾರ್ತೆ : ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ಮೂರ್ತಿಯನ್ನು ಅನುಮತಿ ಪಡೆಯದೆ ಪ್ರತಿಷ್ಠಾಪಿಸಿದ್ದಾರೆಂದು ಪೊಲೀಸರು ತೆರವು ಮಾಡಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಣಿ ಚೆನ್ನಮ್ಮ ಮೂರ್ತಿಯನ್ನು ತೆರವುಗೊಳಿಸುತ್ತಿರುವುದನ್ನು ವಿಡಿಯೋ ಮಾಡುತ್ತಿದ್ದ ಯುವಕರನ್ನು ಪೊಲೀಸರು ಅಟ್ಟಾಡಿಸಿ ಹೊಡೆದಿದ್ದಾರೆ ಎನ್ನಲಾಗಿದೆ.

ನಾಲ್ಕು ವರ್ಷದಿಂದ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಗ್ರಾ.ಪಂ ಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಮರಾಠಿಗರ ಪ್ರಾಬಲ್ಯವಿರುವ ಧಾಮಣೆ ಗ್ರಾಮದಲ್ಲಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ಮಾಡಲಾಗುತ್ತಿದೆ ಎಂದು ಕನ್ನಡಿಗರು ಆರೋಪಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕನ್ನಡಿಗರು ಏಕಾಏಕಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ ಪ್ರತಿಷ್ಠಾಪಿಸಿದ್ದ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮೂರ್ತಿ ತೆರವು ಮಾಡಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

ಸ್ಥಳದಲ್ಲಿ ಡಿಸಿಪಿ, ಮೂವರು ಪಿಐ ಸೇರಿ ಐವತ್ತಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದುಬಂದಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!