ವಿವೇಕವಾರ್ತೆ : ಬೆಳಗಾವಿಯ ಹಿರೇಬಾಗೇವಾಡಿಯ ಬಸವನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್‌ಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಂಜಾಬಿನಿಂದ ಹುಬ್ಬಳ್ಳಿಗೆ ಲಾರಿಯಲ್ಲಿ ಸೇಬು ಹಣ್ಣು ಸಾಗಣೆ ಮಾಡಲಾಗುತ್ತಿತ್ತು.
ಲಾರಿ ಪಲ್ಟಿ ಹೊಡೆದು ಬಿದ್ದ ಕಾರಣ ಅಪಾರ ಪ್ರಮಾಣದ ಸೇಬು ಹಣ್ಣು ನಾಶವಾಗಿವೆ ಎಂದು ತಿಳಿದುಬಂದಿದೆ.
ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.