Tuesday, September 26, 2023

ಮನೆಗೆ ಕನ್ನ ಹಾಕಿ ನಿಂಬೆಹಣ್ಣು ಇಟ್ಟು ಎಸ್ಕೇಪ್ ಆದ ಜ್ಯೋತಿಷಿ.!

ವಿವೇಕ ವಾರ್ತೆ : ಅಮವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗನಾಣ್ಯ ದೋಚಿ ನಿಂಬೆಹಣ್ಣು ಇಟ್ಟು ಮಾಟ ಮಾಡಿಸಿದ್ದಾರೆ ಎಂದೇಳಿ ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಿಳೆ ತನ್ನ ಮಗಳಿಗೆ ಕುಣಿಗಲ್​ನ ಹೆಬ್ಬೂರು ನಿವಾಸಿ ಗೋವಿಂದ ಗೌಡ ಎಂಬುವರೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಉಂಟಾಗಿ ಮಗಳು ತವರು ಮನೆಗೆ ಬರುತ್ತಿದ್ದಳು. ಇದರಿಂದಾಗಿ ಇಂದಿರಾ ಚಿಂತೆಗೀಡಾಗಿದ್ದಳು.

ಈ ಬಗ್ಗೆ ಇಂದಿರಾ ಕೂಡ ತನ್ನ ತಾಯಿಯೊಂದಿಗೆ ದುಃಖ ತೋಡಿಕೊಂಡಿದ್ದಳು. ಸಮಸ್ಯೆಗೆ ಪರಿಹಾರವೆಂಬಂತೆ ಆಕೆಯ ತಾಯಿಯು ತನಗೆ ಜ್ಯೋತಿಷಿ ಸುರೇಶ್ ಪಾಟೀಲ್ ಪರಿಚಯವಿದ್ದು, ಅವರ ಬಳಿ ವಿಚಾರಿಸು ಎಲ್ಲವೂ ಸರಿಹೋಗಲಿದೆ ಎಂದಿದ್ದಳು.

ಅದರಂತೆ ಕಳೆದ‌ ಡಿಸೆಂಬರ್ ತಿಂಗಳಿನಲ್ಲಿ ಮಹಿಳೆಯ ಮನೆಗೆ ಬಂದ ಜ್ಯೋತಿಷಿ ಎಲ್ಲವನ್ನೂ ಗಮನಿಸಿದ್ದಾನೆ. ನಿಮ್ಮ‌ ಮಗಳ ಜೀವನ ಸರಿಪಡಿಸುತ್ತೇನೆ, ಆದರೆ ಅಮಾವಾಸ್ಯೆ ದಿನ ಮನೆಯಲ್ಲಿ ಯಾರೂ ಇರಬಾರದು. ಎಲ್ಲರೂ ದೇವಸ್ಥಾನಕ್ಕೆ ಹೋಗಿ ಎಂದು ಹೇಳಿದ್ದಾನೆ. ಅವನ ಮಾತಿನಂತೆ ಇಂದಿರಾ ಇಂದಿರಾ ಕುಟುಂಬಸ್ಥರು ದೇವಸ್ಥಾನಕ್ಕೆ ಹೋಗಿದ್ದಾರೆ.

ಇದೇ ಸರಿಯಾದ ಸಮಯ ಅಂದುಕೊಂಡ ಆರೋಪಿ ಮನೆಗೆ ಬಂದು ಬೀರುವಿನಲ್ಲಿದ್ದ 5 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿದ್ದ.‌ ಬಳಿಕ ಬಿರುವಿನಲ್ಲಿ ನಿಂಬೆ ಹಣ್ಣು ಇಟ್ಟು ಎಸ್ಕೇಪ್ ಆಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೆಲ ದಿನಗಳ ಬಳಿಕ ಕುಟುಂಬಸ್ಥರನ್ನು ಭೇಟಿಯಾಗಿ ಮನೆಗೆ ಬಂದು ಬೀರುವಿನ ಬಾಗಿಲು ತೆಗೆಯಲು ಹೇಳಿ ತಾನೇ ಇಟ್ಟಿದ್ದ ನಿಂಬೆಹಣ್ಣು ತೋರಿಸಿದ್ದಾನೆ. ನಿಮ್ಮ ಬೀಗರು ಮಾಟ, ಮಂತ್ರ ಮಾಡಿಸಿ ಬಂಗಾರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

65 ದಿನ ಟೈಮ್ ಕೊಡಿ ದೋಚಿರುವ ಒಡವೆಗಳನ್ನು ಮರಳಿ ಕೊಡಿಸುವುದಾಗಿ ನಂಬಿಸಿ ಪರಾರಿಯಾಗಿದ್ದಾನೆ.‌ ಎರಡು ತಿಂಗಳ ಬಳಿಕ ಪೋನ್ ಮಾಡಿದಾಗ, ಫೋನ್ ಸ್ಚಿಚ್ ಆಫ್ ಮಾಡಿಕೊಂಡಿದ್ದ. ಆಬಳಿಕ ಸಂಶಯಗೊಂಡ ಮಹಿಳೆ, ಯಲಹಂಕ ಪೊಲೀಸರಿಗೆ ಜ್ಯೋತಿಷಿ ವಿರುದ್ಧ ದೂರು ನೀಡಿದ್ದಾರೆ.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!