ವಿವೇಕ ವಾರ್ತೆ : ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಗಶಟ್ಟಿ ಕುಲಕರ್ಣಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದೆ ಪ್ರಿನ್ಸಿಪಾಲ್ ನಾಗಶೆಟ್ಟಿ 6 ತಿಂಗಳ ಹಿಂದಷ್ಟೇ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದ, 13ರಿಂದ 15 ವರ್ಷದ ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪ ಕೇಳಿಬಂದಿದೆ.
ಜುಲೈ 7ರಂದು ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ನಾಲ್ವರು ವಿದ್ಯಾರ್ಥಿನಿಯರು ಜುಲೈ 20ರಂದು ಪೊಲೀಸರಿಗೆ ದೂರು ನೀಡಿದ್ದರು. ಜುಲೈ 7ರಂದು ತನ್ನ ಬರ್ತ್ ಡೇ ಇದೆ ಎಂದು ವಿದ್ಯಾರ್ಥಿನಿಯರಿಗೆ ಸ್ಟೀಟ್ ಕೊಡುವ ನೆಪದಲ್ಲಿ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯೊಬ್ಬಳ ಕೈ ಹಿಡಿದು ಎಳೆದು ಚುಂಬಿಸಿದ್ದಾನೆ ಎಂದು ದೂರು ನೀಡಲಾಗಿದೆ.
ಹೀಗಾಗಿ ಪೋಕ್ಸೋ ಪ್ರಕರಣದಡಿ ನಾಗಶೆಟ್ಟಿ ಕುಲಕರ್ಣಿ ಅರೆಸ್ಟ್ ಆಗಿದ್ದಾರೆ.