ವಿವೇಕವಾರ್ತೆ : ತುಮಕೂರು ನಗರದಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಜತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಯುವಕನೋರ್ವನನ್ನು ಅರೆಸ್ಟ್ ಮಾಡಲಾಗಿದೆ.
ಕುವೆಂಪು ನಗರದ ನಿವಾಸಿ ದರ್ಶನ್ (26) ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ಸೆ. 30ರಂದು ನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಆಯೋಜನೆ ಮಾಡಲಾಗಿತ್ತು.
ಈ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಜತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ದರ್ಶನ್ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಹಿಳಾ ಪಿಎಸ್‌ಐ, ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದ ವೇಳೆ ಎದೆಯ ಭಾಗಕ್ಕೆ ಕೈಹಾಕಿ ಎಳೆದಿದ್ದಾನೆ ಎಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿ ದರ್ಶನ್ ನನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.