ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ : ತಾಲೂಕು ವೈದ್ಯಾಧಿಕಾರಿಗೆ ಧರ್ಮದೇಟು.!

Published on

spot_img
spot_img

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟಿಹೆಚ್​ಒನನ್ನು ಸ್ಥಳೀಯರು ಹಿಡಿದು ಥಳಿಸಿರುವ ಘಟನೆ ನಡೆದಿದೆ.

ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ (ಟಿಎಚ್‌ಓ) ಎಲ್ಡೋಸ್ ಟಿ.ವರ್ಗೀಸ್ ಎನ್ನುವಾತ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ ವಿಚಾರವಾಗಿ ಮಾತನಾಡಲು ತಾನು ವಾಸವಿದ್ದ ಕ್ವಾಟ್ರಸ್​ಗೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾಗ, ಅಲ್ಲಿಂದ ತಪ್ಪಿಸಿಕೊಂಡು ಆಚೆ ಬಂದು ಮಹಿಳಾ ಸಿಬ್ಬಂದಿ ಸ್ಥಳೀಯರಿಗೆ ಹೇಳಿದ್ದಾರೆ.

ವಿಷಯ ತಿಳಿಯುತಲೇ ಸ್ಥಳೀಯರು ಹೋಗಿ ಟಿಹೆಚ್​ಒ ಡಾ.ಎಲ್ಡೋಸ್ ಧರ್ಮದೇಟು ನೀಡಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯ ಡಿ-ದರ್ಜೆ ಮಹಿಳಾ ಸಿಬ್ಬಂದಿ ಇತ್ತೀಚೆಗೆ ಕಳಸ ಆಸ್ಪತ್ರೆಗೆ ವರ್ಗಾವಣೆಯಾಗಿದ್ದರು. ಈ ಸಂಬಂಧ ಮಾತನಾಡುವ ಬಗ್ಗೆ ಸರ್ಕಾರಿ ನಿವಾಸಕ್ಕೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಒತ್ತಾಯಪೂರ್ವಕವಾಗಿ ನನ್ನನ್ನು ವಸತಿಗೃಹಕ್ಕೆ ಕರೆದುಕೊಂಡು ಬಂದು ಕೊಠಡಿಯಲ್ಲಿ ಕೂಡಿ ಹಾಕಿದ್ದರು ಎಂದು ಡಿ ಗ್ರೂಪ್ ಮಹಿಳಾ ನೌಕರೆ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಬಾಳೆಹೊನ್ನೂರು ಠಾಣೆಯ ಪೊಲೀಸರು ಎನ್.ಆರ್.ಪುರ ತಾಲೂಕು ವೈದ್ಯಧಿಕಾರಿ ಡಾ.ಎಲ್ಡೋಸ್’ನನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!