ಮೃತನ ಎರಡನೇ ಪತ್ನಿ ಮತ್ತು ನಾದಿನಿಯನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು.!

Published on

spot_img
spot_img

ವಿವೇಕವಾರ್ತೆ : ಬೆಂಗಳೂರು ನಗರದಲ್ಲಿ ನಡೆದ ಬಿಹಾರ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಮೃತನ ಎರಡನೇ ಪತ್ನಿ ಮತ್ತು ನಾದಿನಿಯನ್ನು ಬಂಧಿಸಿ ಕಂಬಿಹಿಂದೆ ತಳ್ಳಿದ್ದಾರೆ.

ಬಂಧಿತ ಆರೋಪಿಗಳು ನಜೀರ್ ಖಾಟುನ್ ಮತ್ತು ಕಾಶ್ಮೀರಿ ಎಂದು ತಿಳಿದುಬಂದಿದೆ. ಇನ್ನೂ ಶಕೀಲ್ ಅಕ್ತಾರ್ ಎಂಬಾತ ಕೊಲೆಯಾದ ದುರ್ದೈವಿ.

ಘಟನೆಯ ಹಿನ್ನೆಲೆ :
ಅಕ್ಟೋಬರ್ 9 ರಂದು ರಾತ್ರಿ ವೇಳೆ ಮಲಗಿದ್ದ ಶಕೀಲ್ ಎದೆ ಮೇಲೆ ಕುಳಿತು ಪತ್ನಿ ನಜೀರ್ ಖಾಟುನ್ ಬಲವಾಗಿ ಕತ್ತು ಹಿಸುಕಿದ್ದಾಳೆ. ಈ ವೇಳೆ ನಾದಿನಿ ಕಾಶ್ಮೀರಿ ಶಕೀಲ್​ನ ಕೈಕಾಲುಗಳನ್ನು ಬಿಗಿಯಾಗಿ ಹಿಡಿದಿದ್ದಳು ಎನ್ನಲಾಗಿದೆ.

ಇವರಿಬ್ಬರಿಂದ ಬಿಡಿಸಿಕೊಳ್ಳಲು ಮಂಚದಿಂದ ಕೆಳಗೆ ಬಿದ್ದರೂ ಬಿಡದ ಆರೋಪಿಗಳು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಬೆಡ್ ಶೀಟ್​ನಲ್ಲೇ ಶವವನ್ನು ಕಟ್ಟಿದ್ದರು. ಭಾರೀ ಮಳೆ ಹಿನ್ನೆಲೆ‌ ಯಾರಿಗೂ ತಿಳಿಯದಂತೆ ಮಧ್ಯರಾತ್ರಿಯಲ್ಲಿ ಸುರಿಯುತ್ತಿದ್ದ ಮಳೆಯಲ್ಲೇ ಶವ ಸಾಗಿಸಿದ್ದಾರೆ. ಮನೆಯಿಂದ ಸ್ವಲ್ಪ ದೂರದಲ್ಲೇ ಇದ್ದ ಹೊಂಡದಲ್ಲಿ ಶವವನ್ನು ಬಿಸಾಡಿ ಬಂದಿದ್ದರು.

ಎರಡು ದಿನಗಳ ನಂತರ ತಾನೇ ಠಾಣೆಗೆ ತೆರಳಿ ಪತಿ ಕಾಣೆಯಾಗಿದ್ದಾನೆಂದು ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರಿಗೆ ಅಕ್ಟೋಬರ್ 15 ರಂದು ಹೊಂಡದಲ್ಲಿ ಕೆಟ್ಟ ವಾಸನೆ ಬರುತ್ತಿದ್ದೆ ಎಂಬ ಮಾಹಿತಿ ತಿಳಿದುಬಂದಿದೆ.

ಅದರಂತೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಶವ ಹೊರತೆಗೆದು ತನಿಖೆ ಕೈಗೊಂಡ ಸಂಪಿಗೇಹಳ್ಳಿ ಪೊಲೀಸರು ನಜೀರ್ ಖಾಟುನ್ ಮತ್ತು ಕಾಶ್ಮೀರಿಯನ್ನು ಅರೆಸ್ಟ್ ಮಾಡಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!