ಮೊಬೈಲ್ʼಗೆ ಬಂದ ವಿಶೇಷ ಸಂದೇಶ ; ಕ್ಷಣ ಕಾಲ ದಂಗಾದ ಮೊಬೈಲ್‌ ಬಳಕೆದಾರ.!

Published on

spot_img
spot_img

ವಿವೇಕವಾರ್ತೆ : ಭಾರತ ಸರ್ಕಾರ ಹಲವಾರು ಮೊಬೈಲ್ ಬಳಕೆದಾರರ ಮೊಬೈಲ್ ಗಳಿಗೆ ತುರ್ತು ಧ್ವನಿಯೊಂದಿಗೆ ಸಂದೇಶವೊಂದನ್ನು ಕಳುಹಿಸಿದೆ.

ಯಾಕೆ ಈ ಸಂದೇಶ ಅಂತ ಗೊತ್ತಾ.?

ಈ ಸಂದೇಶ ಬರುವುದಕ್ಕೂ ಮೊದಲೇ ಹಲವರ ಮೊಬೈಲ್ ಗಳಿಗೆ ಈ ರೀತಿಯ ಸಂದೇಶವನ್ನ ಕಳುಹಿಸುವುದಾಗಿ ಮೊದಲೇ ಮೆಸೇಜ್ ಗಳನ್ನು ಕಳುಹಿಸಲಾಗಿತ್ತು.

ಅದರಲ್ಲಿ “ ಪ್ರಮುಖ ಸೂಚನೆ”: ತುರ್ತು ಪರಿಸ್ಥಿತಿಯ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ, ಈ ಸಂದೇಶವು ನಿಜವಾದ ತುರ್ತುಪರಿಸ್ಥಿತಿಯನ್ನು ಸೂಚಿಸುವುದಿಲ್ಲ.

ಈ ಸಂದೇಶವನ್ನು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಯೋಜಿತ ಪ್ರಯೋಗ ಪ್ರಕ್ರಿಯೆಯಾಗಿ ಕಳುಹಿಸಲಾಗಿದೆ ಎಂದು ತಿಳಿಸಲಾಗಿತ್ತು.

ಇನ್ನೂ ಸಂದೇಶದಲ್ಲಿ ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನ ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್—ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕರ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ. ಜೊತೆಗೆ ಸಮಯ ದಿನಾಂಕವನ್ನೂ ನಮೂದಿಸಲಾಗಿದೆ.

ಪ್ರಯೋಜನ :

ಸುನಾಮಿ, ಅಗ್ನಿ ದುರಂತ ಭೂಕಂಪ, ಸುನಾಮಿ, ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್ ಬಳಕೆದಾರರಿಗೆ ಈ ಫ್ಲ್ಯಾಶ್ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!