ವಿವೇಕ ವಾರ್ತೆ : ಕಳೆದ ಕೆಲ ದಿನಗಳಿಂದ ದೂರಾಗಿದ್ದ ಮಳೆ ಈಗ ಮತ್ತೆ ಹತ್ತಿರವಾಗಲಿದೆ ಎಂದು ಹವಾಮಾನ ಇಲಾಖೆ ಸುದ್ದಿ ನೀಡಿದೆ.
ಸೆಪ್ಟೆಂಬರ್ 2 ರಿಂದ ನಾಲ್ಕೈದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಅಂದರೆ ಸೆಪ್ಟೆಂಬರ್ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಜನರ ಪಾಲಿಗೆ ಮಳೆರಾಯ ಸೆಪ್ಟೆಂಬರ್ ತಿಂಗಳಲ್ಲಿ ಕರುಣೆ ತೋರುವ ಸಾಧ್ಯತೆಯಿದೆ. ಸೆಪ್ಟೆಂಬರ್ 2ರ ಬಳಿಕ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸೆಪ್ಟೆಂಬರ್ 2ರ ನಂತರ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಮೇಲ್ಮೈ ಸುಳಿಗಾಳಿ ಪರಿಸ್ಥಿತಿಯು ಕ್ರಮೇಣ ವಾಯಭಾರ ಕುಸಿತವಾಗಿ ಮಾರ್ಪಡುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಭಾರತ, ಮಧ್ಯ ಭಾರತ ಹಾಗೂ ಪೂರ್ವ ಭಾರತದ ಹಲವು ಭಾಗಗಳಿಗೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ.