ವಿವೇಕ ವಾರ್ತೆ : ತನ್ನ ಸರ್ವೀಸ್ ರಿವಾಲ್ವರ್‌ನಿಂದ ಸಹಾಯಕ ಪೊಲೀಸ್ ಕಮಿಷನರ್ ವೊಬ್ಬರು (ಎಸಿಪಿ) ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡು ಹಾರಿಸಿ ಕೊಂದು ಬಳಿಕ ಅದೇ ರಿವಾಲ್ವರ್‌ನಿಂದ ತಾನೂ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, 57 ವರ್ಷದ ಎಸಿಪಿ ಭರತ್ ಗಾಯಕ್ವಾಡ್ ಅವರು ಪುಣೆಯಲ್ಲಿ ತಮ್ಮ ಪತ್ನಿ ಮೋನಿ (44) ಮತ್ತು ಸೋದರಳಿಯ ದೀಪಕ್ (35) ಮೇಲೆ ಗುಂಡು ಹಾರಿಸಿದ್ದಾರೆ. ಇದರ ಬೆನ್ನಲ್ಲೇ ಅವರೂ ಆತ್ಮಹತ್ಯೆ ಶರಣಾಗಿದ್ದಾರೆ.
ಗಾಯಕ್ವಾಡ್ ಅವರ ಹೆಂಡತಿ ಇಬ್ಬರು ಮಕ್ಕಳೊಂದಿಗೆ ಪುಣೆಯಲ್ಲಿ ವಾಸಿಸುತ್ತಿದ್ದರು. ಇನ್ನು ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮೂವರನ್ನು ಜುಪಿಟರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ವರದಿಯಿಂದ ತಿಳಿದುಬಂದಿದೆ.