ವಿವೇಕವಾರ್ತೆ : ಮಂಗಳೂರಿನ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಬ್ಲ್ಯೂಡಿ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ರೋನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಎಂದು ತಿಳಿದುಬಂದಿದೆ.
ರೋನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ 20 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರುಗಳಾದ ಕಲಾವತಿ.ಕೆ, ಚಲುವರಾಜು, ಬಿ, ಹಾಗೂ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್.ಪಿ ಇವರು ಸಿಬ್ಬಂದಿ ಜೊತೆ ಈ ಕಾರ್ಯಾಚರಣೆ ನಡೆಸಿದರು.