ವಿವೇಕ ವಾರ್ತೆ : ಸಾಮಾಜಿಕ ಜಾಲತಾಣಗಳಲ್ಲಿ ಶಾಲಾ ಶಿಕ್ಷಕಿಯೊಬ್ಬರು ಲಂಚ ತೆಗೆದುಕೊಳ್ಳುವ ದೃಶ್ಯವೊಂದು ವ್ಯಾಪಕವಾಗಿ ವೈರಲ್ ಆಗಿದ್ದು, ವಿಡಿಯೋ ಗಮನಿಸಿದ ಶಿಕ್ಷಣ ಇಲಾಖೆ ಶಿಕ್ಷಕಿಯನ್ನು ಕರ್ತವ್ಯದಿಂದ ಸಸ್ಪೆಂಡ್ ಮಾಡಿದೆ.
ವಿಡಿಯೋದಲ್ಲಿ ಇರುವ ಶಿಕ್ಷಕಿ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಪ್ರೌಢ ಶಾಲೆಯಲ್ಲಿ ಕಾರ್ಯ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ರಾಜನಗರ ಕನ್ಯಾ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಶಿಕ್ಷಕರು ನಗದು ಸ್ವೀಕರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನು ಈ ಶಿಕ್ಷಕಿ 6,000 ರೂ. ಲಂಚ ಸ್ವೀಕರಿಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ. ದೃಶ್ಯ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಈ ವಿಷಯ ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದೆ. ಘಟನೆಯ ಬೆನ್ನಲ್ಲೇ ಇಲಾಖೆಯ ಅಧಿಕಾರಿಗಳು ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಕೆ. ಕಾಟೋರಿ ಅವರು ಸಾಗರದಲ್ಲಿರುವ ಉಪನಿರ್ದೇಶಕರಿಗೆ ಪತ್ರ ಬರೆದಿದ್ದರು. ಇದನ್ನು ಗಮನಿಸಿದ ಉಪನಿರ್ದೇಶಕರು ಇದೀಗ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. (ಏಜೆನ್ಸೀಸ್)