ವಿವೇಕ ವಾರ್ತೆ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜಿಎಸ್ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಶ್ರೀನಿವಾಸ್ (15) ಎಂಬ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ 9 ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಶ್ರೀನಿವಾಸ್ ಕಂದಾಯ ಇಲಾಖೆಯಲ್ಲಿ ವಿಎ ಆಗಿ ಕಡೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ.
ರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ಶ್ರೀನಿವಾಸ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.