ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ ; ಪ್ರಿನ್ಸಿಪಾಲ್ ಸಸ್ಪೆಂಡ್..!

Published on

spot_img
spot_img

ವಿವೇಕ ವಾರ್ತೆ : ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಸರಕಲ್ ಗ್ರಾಮದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಪ್ರಭಾರ ಪ್ರಾಂಶುಪಾಲರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈತನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಸಿಬ್ಬಂದಿಗೆ ಕಿರುಕುಳ ಹಾಗೂ ಎರಡನೇ ಮದುವೆಯಾಗಿರುವ ಬಗ್ಗೆ ಆರೋಪ ಕೇಳಿಬಂದಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಎರಡನೇ ಮದುವೆಯಾದ ಫೋಟೊ, ಅಶ್ಲೀಲ ಚಿತ್ರ, ವಿಡಿಯೋ ಹಾಗೂ ಸಂಭಾಷಣೆ ವೈರಲ್ ಆಗಿದ್ದವು. ಈ ವಿಚಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಗಮನಕ್ಕೆ ಬಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ಇಲಾಖೆ ರಚಿಸಿದ ವಿಶೇಷ ತನಿಖಾ ತಂಡ ಗ್ರಾಮಕ್ಕೆ ಭೇಟಿ ನೀಡಿ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಮಾಹಿತಿ ಕಲೆ ಹಾಕಿದೆ. ಲೈಂಗಿಕ ಕಿರುಕುಳದ ಬಗ್ಗೆ ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಪಾಲಕರು ಹೇಳಿಕೆಗಳನ್ನು ಕೊಟ್ಟಿದ್ದಾರೆ.

ಇಲಾಖೆಯ ನಿರ್ದೇಶಕರಿಗೆ ಸಮಗ್ರವಾದ ವರದಿ ಸಿದ್ದಪಡಿಸಿ ಸಲ್ಲಿಸಲಾಗಿದೆ. ವರದಿಯಲ್ಲಿನ ಅಂಶಗಳು ಮೇಲ್ನೋಟಕ್ಕೆ ಸಾಬೀತು ಹಿನ್ನೆಲೆ ಇಲಾಖೆಯ ತನಿಖೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

 

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!