ವಿವಾಹಿತೆಯ ನಗ್ನ ಪೋಟೋ ಕ್ಲಿಕ್ಕಿಸಿ ವೈರಲ್ ಮಾಡುವುದಾಗಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿ ಅರೆಸ್ಟ್.

Published on

spot_img
spot_img

ವಿವೇಕವಾರ್ತೆ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲ್ಯಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.

ಪ್ರಶಾಂತ ಭಟ್ ಮಾಣಿಲ ಎಂಬಾತ ಈ ಕೃತ್ಯವೆಸಗಿದ್ದು, ಈತ ಪುತ್ತೂರಿನ ಆರ್ಲಪದವು ಮೂಲದವನು ಎಂದು ತಿಳಿದುಬಂದಿದೆ.

ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಪ್ರಶಾಂತ ಭಟ್‌ ಪರಿಚಯ ಮಾಡಿಕೊಂಡಿದ್ದನು. ಪರಿಚಯ ಸ್ನೇಹಕ್ಕೆ ತಿರುಗಿ ಪ್ರೇಮಕ್ಕೆ ತಿರುಗಿದೆ.

2023ರ ಜನವರಿ ತಿಂಗಳಲ್ಲಿ ಪ್ರಶಾಂತ್‌ ಮಹಿಳೆಯನ್ನು ಭೇಟಿಯಾಗಿದ್ದನು. ಲಾಡ್ಜ್’ಲ್ಲಿ ರೂಂ ಮಾಡಿ, ಬಲವಂತವಾಗಿ ಮಹಿಳೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ. ಅಲ್ಲದೇ ಅದೇ ಲಾಡ್ಜಿನಲ್ಲಿ ಮತ್ತೊಮ್ಮೆ ಇದೆ ಘಟನೆ ನಡೆದಿದೆ.

ಈ ವೇಳೆ ಪ್ರಶಾಂತ ಆಕೆಯೊಂದಿಗೆ ಖಾಸಗಿ ಕ್ಷಣಗಳ ಫೋಟೋ ಸೆರೆ ಹಿಡಿದಿದ್ದಾನೆ. ಜತೆಗೆ ವಿಡಿಯೊ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ. ಮಾತ್ರವಲ್ಲದೆ ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.

ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.

ಅಲ್ಲದೇ ಮಹಿಳೆಯ ತಾಯಿ ಹಾಗೂ ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.

ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!