ವಿವೇಕ ವಾರ್ತೆ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ಗೆ ಆಗಮಿಸಿದಾಗ ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದರು.
ಘಟನೆಯ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಮಮತಾ ಕೈಮುಗಿದು ಹೊಟೇಲ್‌ವೊಳಗೆ ಬರುವುದನ್ನು ವಿಡಿಯೋದಲ್ಲಿ ನೋಡಬಹುದು. ಆಗ ಅಲ್ಲಿ ನೆರೆದವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಈ ವೇಳೆ, ಹೋಟೆಲ್ ಸಿಬ್ಬಂದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗೆ ಆರತಿ ಎತ್ತಿ ಕುಂಕುಮ ಹಚ್ಚಲು ಮುಂದಾಗಿದ್ದಾರೆ. ಆದರೆ, ಇದನ್ನು ಸಿಎಂ ಮಮತಾ ಬ್ಯಾನರ್ಜಿ ನಯವಾಗಿ ಬೇಡ ಎಂದು ತಿರಸ್ಕರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.
ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಕೂಡ ಇದನ್ನು ಹಂಚಿಕೊಂಡಿದ್ದಾರೆ.
https://twitter.com/SuvenduWB/status/1697252370470801625?ref_src=twsrc%5Etfw%7Ctwcamp%5Etweetembed%7Ctwterm%5E1697252370470801625%7Ctwgr%5E39472fd4ad2d28703393148a3ebc8d862c674ff0%7Ctwcon%5Es1_c10&ref_url=https%3A%2F%2Fapi-news.dailyhunt.in%2F