ವಿವೇಕ ವಾರ್ತೆ : ಚಿತ್ರದುರ್ಗ ತಾಲೂಕಿನ ಜಾನಕಲ್ ಗ್ರಾಮದ ಸಮೀಪ, ಗ್ರಾಮ ಪಂಚಾಯತ್ನಲ್ಲಿ ಎಸ್‌ಡಿಎ (SDA) ಆಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿ ತಿಪ್ಪೇಸ್ವಾಮಿ ಎಂದು ತಿಳಿದುಬಂದಿದ್ದು, ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.
ಮೃತ ತಿಪ್ಪೇಸ್ವಾಮಿ ಅವರು ಮೂಲತಃ ಸೊಂಡೆಕೊಳ ಗ್ರಾಮದವರು. ಹೊಳಲ್ಕೆರೆ ತಾಲೂಕಿನ ಉಪ್ಪರಿಗೆಹಳ್ಳಿಯ ಗ್ರಾಮ ಪಂಚಾಯ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಜಾನಕಲ್ ಗ್ರಾಮದಲ್ಲಿನ ಮಗಳ ಮನೆಗೆ ಬಂದು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ಮೃತ ವ್ಯಕ್ತಿ ಡೆತ್ನೋಟ್ ಬರೆದಿಟ್ಟಿದ್ದು, ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪರಿಂದ ಅಮಾನತ್ತು ಬೆದರಿಕೆ ಹಾಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಇದರೊಂದಿಗೆ ಹೊಳಲ್ಕೆರೆ ತಾಲೂಕು ಪಂಚಾಯಿತಿ ಇ.ಓ ರವಿ, ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಅನಗ್ಯತವಾಗಿ ಕಿರುಕುಳ ನೀಡಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಇನ್ನು ಎಸ್‌ಡಿಎ ಸಾವಿನ ಬಗ್ಗೆ ಅವರ ಪುತ್ರ ರಾಜಶೇಖರಪ್ಪ ಎನ್ನುವವರು ಹೊಸದುರ್ಗ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ, ಅವರ ಪುತ್ರ ನೀಡಿರುವ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾ.ಪಂ ಇಓ ರವಿ ಹೆಸರನ್ನು ಉಲ್ಲೇಖ ಮಾಡಿಲ್ಲ. ಕೇವಲ ಗ್ರಾ.ಪಂ ಸದಸ್ಯರ ಕಿರುಕುಳ ಹಿನ್ನಲೆ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.