ಸಂಗಮೇಶ್ವರ ತೋಟದಲ್ಲಿ ಗಾಂಧಿ ಜಯಂತಿ ಆಚರಣೆ

Published on

spot_img
spot_img

ಹುಕ್ಕೇರಿ:ಸರಕಾರಿ ಕನ್ನಡ ಶಾಲೆ ಸಂಗಮೇಶ್ವರ ತೋಟದಲ್ಲಿ ಶಾಲಾ ಮಕ್ಕಳಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜಯಂತಿ ಆಚರಣೆ ಗಾಂಧಿ ಜಯಂತಿ – ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ. ಅಕ್ಟೋಬರ್ ೨ ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿ ಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಮತ್ತು ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ.
ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ ಮಾಡುತ್ತಾರೆ. ರಾಷ್ಟ್ರ ಪಿತನಿಗೆ ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ
ಇಂತಹ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ ೨ ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು.ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು.ಗಾಂಧಿಜಿಯವರ ತತ್ವ ಕೆಟ್ಟದ್ದನ್ನು ನೊಡಬಾರದು ಕೆಟ್ಟದ್ದನ್ನು ಕೇಳಬಾರದು ಕೆಟ್ಟದ್ದನ್ನು ಮಾತನಾಡಬಾರದು ಎಂಬುದೆ ಇವರ ಜೀವನ ತತ್ವ.ಕಾರ್ಯಕ್ರಮದ ಸಂದರ್ಭದಲ್ಲಿ ಅತಿಥಿಗಳಾದ ಬ್ರಹ್ಮಾನಂದ ಎಸ್ ಪತ್ತಾರ ಶಿಕ್ಷಕರಾದ ಕುಮಾರ ಮುತ್ನಾಳಿ ಶಿಕ್ಷಕಿಯರಾದ ಜ್ಯೋತಿ ವಾಳ್ವಿ ಅಡುಗೆ ಸಹಾಯಕಿ ಮಹಾನಂದಾ ಮಾದರ. ಕಿರಣ್ ಕೋಚರಿ ವಿನಾಯಕ ಪತ್ತಾರ ಮಹಾಂತೇಶ ಕೊಚರಿ ಭಾಗಿಯಾಗಿದ್ದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!